ಸೋಮವಾರಪೇಟೆ, ಜೂ. 18: ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಘಟಕದ ವತಿಯಿಂದ ತಾ. 22 ರಂದು ಪೂರ್ವಾಹ್ನ 10.30ಕ್ಕೆ ಶನಿವಾರಸಂತೆ ಸಮೀಪದ ಗುಡುಗಳಲೆ ಬಸವೇಶ್ವರ ದೇವಾಲಯದ ಜಾತ್ರಾ ಮೈದಾನದಲ್ಲಿ ಪುಟ್ಟಬಸಪ್ಪ (ಕಲ್ಯಾಣ ಸ್ವಾಮಿ) ಸಂಸ್ಮರಣೆ ಕಾರ್ಯಕ್ರಮ ನಡೆಯಲಿದೆ ಎಂದು ಮಹಾಸಭಾದ ಕಾರ್ಯದರ್ಶಿ ಪುಟ್ಟಸ್ವಾಮಿ ತಿಳಿಸಿದ್ದಾರೆ.

ಕೊಡಗನ್ನಾಳಿದ ವೀರಶೈವ ಲಿಂಗಾಯತ ಅರಸ ಚಿಕ್ಕವೀರರಾಜೇಂದ್ರ ಒಡೆಯರ ಪರವಾಗಿ ಬ್ರಿಟೀಷರ ವಿರುದ್ಧ ಹೋರಾಡಿ ಹುತಾತ್ಮರಾದ ಕಲ್ಯಾಣಸ್ವಾಮಿ ಅವರ ಸಂಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಕೆ.ಬಿ. ಹಾಲಪ್ಪ ವಹಿಸಲಿದ್ದಾರೆ.

ವಿವಿಧ ಮಠಾಧೀಶರಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಶ್ರೀ ಮಹಾಂತ ಸ್ವಾಮೀಜಿ, ಶ್ರೀ ಸದಾಶಿವ ಸ್ವಾಮೀಜಿ, ಶ್ರೀ ಅಭಿನವ ಸಿದ್ದಲಿಂಗ ಸ್ವಾಮೀಜಿ, ಶ್ರೀ ರುದ್ರಮುನಿ ಸ್ವಾಮೀಜಿ, ಶ್ರೀ ಇಮ್ಮಡಿ ಶಿವಲಿಂಗ ಸ್ವಾಮೀಜಿ ಅವರುಗಳು ಸಾನ್ನಿಧ್ಯ ವಹಿಸಲಿದ್ದು, ನ್ಯಾಯವಾದಿ ವಿದ್ಯಾಧರ, ವೀರಶೈವ ಮಹಾಸಭಾದ ರಾಜ್ಯ ಕಾರ್ಯದರ್ಶಿ ರಾಜೇಶ್ವರಿ ನಾಗರಾಜ್, ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಡಿ.ಬಿ. ಧರ್ಮಪ್ಪ, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಮಹೇಶ್, ಕೊಡಗು ಸಮಾಚಾರದ ಮನುಶಣೈ ಅವರುಗಳು ಭಾಗವಹಿಸಲಿದ್ದಾರೆ ಎಂದು ಪುಟ್ಟಸ್ವಾಮಿ ಮಾಹಿತಿ ನೀಡಿದ್ದಾರೆ.