ಸೋಮವಾರಪೇಟೆ, ಜೂ. 18: ಇಲ್ಲಿನ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವತಿಯಿಂದ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ತಾ. 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಯೋಜಿಸ ಲಾಗಿದೆ ಎಂದು ಸಂಸ್ಥೆಯ ಶಿಕ್ಷಕಿ ರಾಗಿಣಿ ತಿಳಿಸಿದ್ದಾರೆ.
ತಾ. 21 ರಂದು ಬೆಳಿಗ್ಗೆ 6 ರಿಂದ 7.30ರವರೆಗೆ ಇಲ್ಲಿನ ಮಾನಸ ಸಭಾಂಗಣದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ ಎಂದು ರಾಗಿಣಿ ಮಾಹಿತಿ ನೀಡಿದ್ದಾರೆ.