ಕೂಡಿಗೆ, ಜೂ. 18: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‍ಗಳಿಗೆ ನಡೆಸಿದ ನೀಟ್ ಪರೀಕ್ಷೆಯಲ್ಲಿ 36ನೇ ರ್ಯಾಂಕ್ ಗಳಿಸಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದಿರುವ ಕೊಡಗು ಜಿಲ್ಲೆಯ ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಅಳುವಾರ ಗ್ರಾಮದ ಡಿ.ಆರ್. ಫಣೀಂದ್ರ ಅವರನ್ನು ಕುಶಾಲನಗರ ದೇವಾಂಗ ಸಂಘ, ಚೌಡೇಶ್ವರಿ ಅಮ್ಮನವರ ದೇವಸ್ಥಾನದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭ ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಡಿ. ವಿಜೇಂದ್ರ, ಉಪಾಧ್ಯಕ್ಷ ಡಿ.ಆರ್. ಸೋಮಶೇಖರ್, ಡಿ.ಕೆ. ಮಹೇಶ್, ಪ್ರಧಾನ ಕಾರ್ಯದರ್ಶಿ ಡಿ.ವಿ. ರಾಜೇಶ್, ಸಹ ಕಾರ್ಯದರ್ಶಿ ಡಿ.ವಿ. ಚಂದ್ರು (ರಾಕಿ), ಖಜಾಂಚಿ ಡಿ.ಆರ್. ಕೃಷ್ಣಕುಮಾರ್ ಸೇರಿದಂತೆ ಸಮಿತಿಯ ನಿರ್ದೇಶಕರು ಇದ್ದರು.