ಸೋಮವಾರಪೇಟೆ, ಜೂ.19: ವಿಶ್ವ ಯೋಗ ದಿನದ ಅಂಗವಾಗಿ ಪತಂಜಲಿ ಯೋಗ ಸಮಿತಿ ವತಿಯಿಂದ ಎರಡು ದಿನಗಳ ಕಾಲ ಉಚಿತ ಯೋಗ ತರಬೇತಿ ಶಿಬಿರ ನಡೆಯಲಿದೆ ಎಂದು ಸಂಸ್ಥೆಯ ಪ್ರಮುಖರಾದ ಎಂ.ಆರ್. ಚಂದ್ರಪ್ಪ ಮಾಸ್ಟರ್ ತಿಳಿಸಿದ್ದಾರೆ.
ಇಲ್ಲಿನ ಕೊಡವ ಸಮಾಜದಲ್ಲಿ ತಾ.20 ಹಾಗೂ 21ರ ಬೆಳಿಗ್ಗೆ 6.30ರಿಂದ 7.30ರವರೆಗೆ ಶಿಬಿರ ನಡೆಯಲಿದೆ. ಶಿಬಿರಕ್ಕೆ ಆಗಮಿಸುವವರು ಯೋಗ ಮ್ಯಾಟ್ ಅಥವಾ ಜಮಖಾನವನ್ನು ತರಬೇಕು. ಹೆಚ್ಚಿನ ಮಾಹಿತಿಗೆ ಮೊ: 9449118456ನ್ನು ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.