ಕುಶಾಲನಗರ, ಜೂ. 19: ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮಹಿಳೆ ಮೃತಪಟ್ಟ ಘಟನೆ ಬೈಲುಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರು ಮೂಲದ ದೀಕ್ಷಾ ಮೃತ ಮಹಿಳೆ. ಈಕೆ ಬೆಂಗಳೂರಿನಿಂದ ಮಡಿಕೇರಿಗೆ ಆಗಮಿಸುತ್ತಿದ್ದು ಬೈಲುಕೊಪ್ಪ ಸಮೀಪ ಮಂಚದೇವನಹಳ್ಳಿ ಬಳಿ ಇವರು ಚಾಲಿಸುತ್ತಿದ್ದ ಐ10 ಕಾರು (ಕೆಎ.03.ಎಎಫ್.1248) ಎದುರಿನಿಂದ ಬಂದ ಕಾರಿಗೆ (ಕೆಎ.01. ಎಂಎಫ್.8344) ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ದೀಕ್ಷಾಳನ್ನು ಪಿರಿಯಾಪಟ್ಟಣ ಆಸ್ಪತ್ರೆಗೆ ಸಾಗಿಸ ಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಬೈಲುಕೊಪ್ಪ ಪೊಲೀಸರು ತಿಳಿಸಿದ್ದಾರೆ. ಈಕೆಯೊಂದಿಗೆ ಪ್ರಯಾಣಿಸುತ್ತಿದ್ದ ಪ್ರೇಮ್ ಕುಮಾರ್ ಮತ್ತು ಮತ್ತೊಂದು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆÉ. ಬೈಲುಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.