ಮಡಿಕೇರಿ, ಜೂ. 19: ಮಡಿಕೇರಿ ತಾಲೂಕು ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ತಾ. 20 ರಂದು ಬೆಳಿಗ್ಗೆ 11 ಗಂಟೆಯಿಂದ 12.30 ಗಂಟೆವರೆಗೆ ನಗರದ ಸೆಸ್ಕ್, ಉಪವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ.
ಮಡಿಕೇರಿ ತಾಲೂಕು ವ್ಯಾಪ್ತಿಯ ಸಾರ್ವಜನಿಕರು, ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವದು. ಸಾರ್ವಜನಿಕರು ಸಭೆಗೆ ಹಾಜರಾಗುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ತಿಳಿಸಿದ್ದಾರೆ.