ಮಡಿಕೇರಿ, ಜೂ.19: ಕರ್ನಾಟಕ ಲೋಕಾಯುಕ್ತ ಜಿಲ್ಲೆಯ ಅಧಿಕಾರಿಗಳು ತಾ. 20 ರಂದು ಸೋಮವಾರಪೇಟೆಯ ತಹಶೀಲ್ದಾರ್ ಕಚೇರಿ ಆವರಣ, ತಾ. 21 ರಂದು ವೀರಾಜಪೇಟೆಯ ತಹಶೀಲ್ದಾರ್ ಕಚೇರಿ ಸಭಾಂಗಣ ಹಾಗೂ ಜೂನ್, 22 ರಂದು ಲೋಕಾಯುಕ್ತ ಕಚೇರಿ ಗೌಳಿಬೀದಿ ಮಡಿಕೇರಿ ಇಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಗಳನ್ನು ವಿತರಿಸಲಿರುವವರು. ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವದು. ಸರ್ಕಾರಿ ಅಧಿಕಾರಿ ಮತ್ತು ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಲೋಕಾಯುಕ್ತ ಪೊಲೀಸ್ ಠಾಣೆ ಗೌಳಿಬೀದಿ ಮಡಿಕೇರಿ, ದೂರವಾಣಿ ಸಂಖ್ಯೆ 08272-220797 ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.