ಸೋಮವಾರಪೇಟೆ, ಜೂ. 19: ದಾನಿಗಳ ನೆರವಿನಿಂದ ಸಮೀಪದ ಯಡವನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್‍ಗೆ ಚಾಲನೆ ನೀಡಲಾಯಿತು.
ಐಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಎಂ. ರಮೇಶ್ ಸ್ಮಾರ್ಟ್ ಕ್ಲಾಸ್‍ಗೆ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‍ಡಿಎಂಸಿ ಅಧ್ಯಕ್ಷ ಕೆ.ಜಿ. ಲತೀಶ್ ವಹಿಸಿದ್ದರು. ವೇದಿಕೆಯಲ್ಲಿ ಗ್ರಾ.ಪಂ. ಸದಸ್ಯೆ ಮಹೇಶ್ವರಿ, ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಡಿ.ಜಿ. ಚಂಗಪ್ಪ ಹಾಗೂ ಸದಸ್ಯರು, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಿ.ಜಿ. ಶಶಿಧರ್, ಶಾಲಾ ಮುಖ್ಯ ಶಿಕ್ಷಕಿ ಮಮತ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಸ್ಮಾರ್ಟ್ ಕ್ಲಾಸ್ ಅಳವಡಿಸಲು ಯಡವನಾಡು ಗ್ರಾಮದ ಮೋಹನ್ ಅವರು ರೂ. 20 ಸಾವಿರ ಧನ ಸಹಾಯ ನೀಡಿದ್ದು, ಕಾರ್ಯಕ್ರಮದಲ್ಲಿ ಮೋಹನ್ ಅವರ ತಂದೆ ಚಲುವೇಗೌಡ ಅವರನ್ನು ಸನ್ಮಾನಿಸಲಾಯಿತು.