ಮಡಿಕೇರಿ, ಜೂ. 20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ವತಿಯಿಂದ ಹೃದಯಕ್ಕಾಗಿ ಯೋಗ ಎಂಬ ಘೋಷ ವಾಕ್ಯದೊಂದಿಗೆ 5 ನೇ ಅಂತರ್ರಾಷ್ಟ್ರೀಯ ಯೋಗ ದಿನಾಚರಣೆಯ ಸಭಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ತಾ. 21 ರಂದು ಬೆಳಗ್ಗೆ 6.50 ಗಂಟೆಗೆ ನಗರದ ಮೈತ್ರಿ ಹಾಲ್‍ನಲ್ಲಿ ನಡೆಯಲಿದೆ.
ಶಾಸಕರಾದ ಎಂ.ಪಿ. ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ಉಪಾಧ್ಯಕೆÀ್ಷ ಲೋಕೇಶ್ವರಿ ಗೋಪಾಲ್, ಬೆಂಗಳೂರು ಆಯುಷ್ ನಿರ್ದೇಶನಾಲಯದ ಆಯುಕೆÀ್ತ ಮೀನಾಕ್ಷಿ ನೇಗಿ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಬಿ.ಎಚ್.ರಾಮಚಂದ್ರ ಇತರರು ಪಾಲ್ಗೊಳ್ಳಲಿದ್ದಾರೆ.