ಕುಶಾಲನಗರ, ಜೂ. 20: ಮಾದಾಪಟ್ಟಣದಲ್ಲಿ ನೂತನ ಸ್ತ್ರೀಶಕ್ತಿ ಸಂಘ ಉದ್ಘಾಟನೆ, ಪೋಷಣೆ ಅಭಿಯಾನ ಕಾರ್ಯಕ್ರಮ ಹಾಗೂ ಕಿಶೋರಿ ದಿನಾಚರಣೆ ನಡೆಯಿತು. ಮಾದಾಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಗುಡ್ಡೆಹೊಸೂರು ಗ್ರಾ.ಪಂ. ಅಧ್ಯಕ್ಷೆ ಭಾರತಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಲಕ್ಷ್ಮಿ ಸ್ತ್ರೀಶಕ್ತಿ ಸಂಘವನ್ನು ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್‍ನ ಸುನೀತಾ ಉದ್ಘಾಟಿಸಿದರು.

ಇದೇ ಸಂದರ್ಭ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ್ ಅವರು ಪೋಷಣೆ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಿ. ಶೋಭಾ ಕಿಶೋರಿ ದಿನಾಚರಣೆ ಬಗ್ಗೆ ಮಾಹಿತಿ ಒದಗಿಸಿದರು.

ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ಯಾಂ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಂಚಾಲಕ ಎಂ.ಎನ್. ಚಂದ್ರಮೋಹನ್ ಪಾಲ್ಗೊಂಡು ಪರಿಸರ ಸ್ವಚ್ಛತೆ ಹಾಗೂ ಗ್ರಾಮದ ಸ್ವಚ್ಛತಾ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಕ್ರೀಡೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಯೋಜನಾ ಅಭಿವೃದ್ಧಿಯ ನಿರ್ಮಲ, ಗ್ರಾ.ಪಂ. ಸದಸ್ಯರಾದ ಪ್ರವೀಣ್, ಪುಷ್ಪ, ಶಾಲಾ ಮುಖ್ಯೋಪಾಧ್ಯಾಯಿನಿ ದೇವಮ್ಮ ಉಪಸ್ಥಿತರಿದ್ದರು. ಇದೇ ಸಂದರ್ಭ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಸೋಮವಾರಪೇಟೆ ಬ್ಲಾಕ್ ಸ್ತ್ರೀಶಕ್ತಿ ಸಂಘದ ಕಾರ್ಯದರ್ಶಿ ಹೆಚ್.ಎಂ. ಹೇಮ, ನೂತನ ಸ್ತ್ರೀಶಕ್ತಿ ಗುಂಪಿನ ಲಕ್ಷ್ಮಿ, ಭಾಗ್ಯಲಕ್ಷ್ಮಿ, ಪೂಜಾ, ದೇವಿ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಕಾರ್ಯಕರ್ತೆಯರು, ಸಹಾಯಕಿಯರು ಇದ್ದರು.