ಮಡಿಕೇರಿ, ಜೂ. 20: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಒಬ್ಬರು ನಿರ್ದೇಶಕರು ಮತ್ತು ಕಾರ್ಯದರ್ಶಿಗಳಿಗೆ ಹಾಲಿನ ಶೇಖರಣೆ, ಸಂಗ್ರಹಣೆ ಹಾಗೂ ಲೆಕ್ಕಪತ್ರ ನಿರ್ವಹಣೆ ಕುರಿತು ವಿಶೇಷ ಕಾರ್ಯಕ್ರಮ ತಾ. 21 ರಂದು (ಇಂದು) 12 ಗಂಟೆಗೆ, ಜಿಲ್ಲಾ ಕೃಷಿ ತರಬೇತಿ ಕೇಂದ್ರ ಕೂಡಿಗೆಯಲ್ಲಿ ನಡೆಯಲಿದೆ.