ಮಡಿಕೇರಿ, ಜೂ. 20: ಮಡಿಕೇರಿ ತಾಲೂಕು ಅಂಗನವಾಡಿ ಕಾರ್ಯಕರ್ತೆ ಯರ ಹಾಗೂ ಸಹಾಯಕಿಯರ ಸಂಘದ 19ನೇ ವಾರ್ಷಿಕ ಮಹಾಸಭೆ ತಾ. 23 ರಂದು ನಡೆಯಲಿದೆ. ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಸಂಘದ ಅಧ್ಯಕ್ಷೆ ವಿ.ಹೆಚ್. ನಾಗರತ್ನ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಉದ್ಘಾಟಿಸಲಿದ್ದಾರೆ.