ಕುಶಾಲನಗರ, ಜೂ. 21: ನಂಜರಾಯಪಟ್ಟಣದ ಶ್ರೀ ನಂಜುಂಡೇಶ್ವರ ಯುವಕ ಸಂಘದ ಆಶ್ರಯದಲ್ಲಿ 4ನೇ ವರ್ಷದ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟ 23 ರಂದು ನಡೆಯಲಿದೆ.
ಗ್ರಾಮದ ಪ್ರಾಥಮಿಕ ಶಾಲಾ ಮೈದಾನದಲ್ಲಿ ಸಂಘದ ಅಧ್ಯಕ್ಷ ಚೆಟ್ಟಡ್ಕ ಎಲ್.ವಿಶ್ವ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ನಂಜರಾಯಪಟ್ಟಣ ಗ್ರಾಪಂ ಅಧ್ಯಕ್ಷೆ ಜೈನಬಾ ಉದ್ಘಾಟಿಸಲಿದ್ದಾರೆ.