ಸಿದ್ದಾಪುರ, ಜೂ. 21: ಎಸ್.ಡಿ.ಪಿ.ಐ. ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಒಳ ರೋಗಿಗಳಿಗೆ ಪಕ್ಷದ ಕಾರ್ಯಕರ್ತರು ಹಾಲು ಹಾಗೂ ಬ್ರೆಡ್ ವಿತರಿಸಿದರು. ಈ ಸಂದರ್ಭ ಪಕ್ಷದ ಪ್ರಮುಖರಾದ ಶೌಕತ್ ಆಲಿ, ಕೆ.ಸಿ. ಬಷೀರ್, ಅಶ್ರಫ್, ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಘವೇಂದ್ರ ಸೇರಿದಂತೆ ಇನ್ನಿತರರು ಇದ್ದರು.