ಮಡಿಕೇರಿ, ಜೂ. 22: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಡಿಕೇರಿ ಘಟಕದ ವ್ಯವಸ್ಥಾಪಕಿ ಗೀತಾ ಹೆಚ್. ಅವರಿಗೆ ಸಾರಿಗೆ ರತ್ನ ಪ್ರಶಸ್ತಿ ಲಭ್ಯವಾಗಿದೆ. ಬೆಂಗಳೂರಿನಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಪ. ಜಾತಿ, ಪ. ಪಂಗಡ ನೌಕರರ ಸಂಘ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸಹಯೋಗದೊಂದಿಗೆ ನಡೆದ ಅಂಬೇಡ್ಕರ್ ಜನ್ಮ ದಿನಾಚರಣೆ ಸಮಾರಂಭದಲ್ಲಿ ಗೀತಾ ಅವರಿಗೆ ಸಾರಿಗೆ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಪಾಲ್ಗೊಂಡಿದ್ದರು.