ಮಡಿಕೇರಿ, ಜೂ. 22: ವೀರಾಜಪೇಟೆ ತಾಲೂಕು ಅಮ್ಮತ್ತಿ ಹೋಬಳಿಯ ಜನಸಂಪರ್ಕ ಸಭೆಯು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ತಾ. 29 ರಂದು ಅಮ್ಮತ್ತಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿದೆ. ಈ ಜನಸಂಪರ್ಕ ಸಭೆಗೆ ವೀರಾಜಪೇಟೆ ತಾಲೂಕಿನ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳುವಂತೆ ಕೊಡಗು ಜಿಲ್ಲಾಡಳಿತ ಕೋರಿದೆ.