ಶನಿವಾರಸಂತೆ, ಜೂ. 22: ದುಂಡಳ್ಳಿ ಗ್ರಾಮ ಪಂಚಾಯಿತಿ ಮಾಸಿಕ ಸಭೆಯಲ್ಲಿ ಸರಕಾರಿ ಆಸ್ಪತ್ರೆಯ ಕಾರ್ಯಕರ್ತೆ ಹಾಗೂ ಆಶಾ ಕಾರ್ಯಕರ್ತೆಯರು ನಿಫಾ ವೈರಸ್ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಗ್ರಾ.ಪಂ. ಅಧ್ಯಕ್ಷ ಸಿ.ಜೆ. ಗಿರೀಶ್, ಅಭಿವೃದ್ಧಿ ಅಧಿಕಾರಿ ಸುಮೇಶ್, ಕಾರ್ಯದರ್ಶಿ ವೇಣುಗೋಪಾಲ್, ಆಶಾ ಕಾರ್ಯಕರ್ತೆಯರಾದ ಮಮ್ತಾಜ್, ಸಂದ್ಯಾ, ಸೌಮ್ಯ, ಎಸ್.ಬಿ. ಭಾಗ್ಯ ಮತ್ತು ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.