ಮಡಿಕೇರಿ, ಜೂ. 22: ವೀರಾಜಪೇಟೆ ಸಮೀಪದ ತೋರ ಗ್ರಾಮದ ಕಾಡಿನಲ್ಲಿ ಸೌದೆ ಕಡಿಯುತ್ತಿದ್ದಾಗ; ಆಯತಪ್ಪಿ ಮರದಿಂದ ಬಿದ್ದು ಜೆ.ಕೆ. ರವಿ (45) ಎಂಬ ವ್ಯಕ್ತಿ ಸಾವಿಗೀಡಾಗಿದ್ದಾರೆ. ಮೃತರ ಪತ್ನಿ ಗೌರಿ ನೀಡಿರುವ ದೂರಿನ ಮೇರೆಗೆ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ಶವವನ್ನು ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಒಪ್ಪಿಸಲಾಗಿದೆ. ಸಹಾಯಕ ಠಾಣಾಧಿಕಾರಿ ಚಂದ್ರಪ್ಪ ಹಾಗೂ ಸಿಬ್ಬಂದಿ ಪ್ರವೀಣ್‍ಕುಮಾರ್ ಸ್ಥಳ ಮಹಜರು ನಡೆಸಿ ಕಾನೂನು ಕ್ರಮ ಜರುಗಿಸಿದ್ದಾರೆ.