ಚೆಟ್ಟಳ್ಳಿ: ಸರಕಾರಿ ಶಾಲೆಗಳಲ್ಲಿ ಸಿಗುವ ಸೌಲಭ್ಯಗಳನ್ನು ಪಡೆದು ಶಿಕ್ಷಣದ ಮೂಲಕ ಪ್ರತಿಭಾನ್ವಿತರಾಗಿ ಮುಂದೆ ಬರಬೇಕೆಂದು ವೀರಾಜಪೇಟೆ ತಹಶೀಲ್ದಾರ್ ಗೋವಿಂದರಾಜು ಕರೆ ನೀಡಿದರು.
ಬಿಎಸ್‍ಎಸ್ ಮೈಕ್ರೋ ಫೈನಾನ್ಸ್ ಸಂಸ್ಥೆ ವತಿಯಿಂದ ಚೆನ್ನಯ್ಯನ ಕೋಟೆಯ ಸರ್ಕಾರಿ ಶಾಲೆಯ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಸರ್ಕಾರಿ ಶಾಲೆಗಳಲ್ಲಿ ಎಲ್ಲಾ ಸೌಲಭ್ಯಗಳು ಇದ್ದು ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದೆ ಓದಿ ಗುರಿ ಮುಟ್ಟುವ ಛಲದೊಂದಿಗೆ ಮುಂದೆ ಬರಬೇಕೆಂದರು.
ಕರ್ನಾಟಕ ಸೇರಿದಂತೆ ಇತರ ರಾಜ್ಯಗಳಲ್ಲಿ ಸುಮಾರು ಐದು ಲಕ್ಷಕ್ಕೂ ಹೆಚ್ಚು ಮಂದಿಗೆ ಕಿರು ಹಣಕಾಸು ಯೋಜನೆಯ ಮೂಲಕ ಗ್ರಾಮೀಣ ವರ್ಗದ ಜನರನ್ನು ಅಭಿವೃದ್ಧಿಯ ಮೂಲಕ ಮುಂದೆ ತರುವ ಕಾರ್ಯಕ್ರಮ ನಡೆಯುತ್ತಿದೆ ಎಂದು ಸಂಸ್ಥೆಯ ವಲಯ ವ್ಯವಸ್ಥಾಪಕ ಮಧುಸೂದನ್ ತಿಳಿಸಿದರು.
ಈ ಸಂದರ್ಭ ಚೆನ್ನಯ್ಯನಕೊಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ, ಶಾಲಾ ಎಸ್ಡಿಎಂಸಿ ಅಧ್ಯಕ್ಷೆ ಶೋಭಾ, ಪ್ರೌಢಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಸಾಬೀರಾ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ರೋಸಿ ರಾಣಿ, ಪ್ರೌಢಶಾಲಾ ಮುಖ್ಯ ಶಿಕ್ಷಕ ರವಿಚಂದ್ರನ್, ಕಂದಾಯ ಇಲಾಖೆ ಅಧಿಕಾರಿ ಅನಿಲ್, ಬಿಎಸ್‍ಎಸ್ ಸಂಸ್ಥೆಯ ಪ್ರಮುಖರಾದ ಸುರೇಶ್, ಮಹೀಂದ್ರ, ಶರತ್, ಚಂದ್ರಶೇಖರ್ ಮತ್ತಿತರರು ಹಾಜರಿದ್ದರು. ಪೊನ್ನಂಪೇಟೆ: ಪೊನ್ನಂಪೇಟೆ ರಾಮಕೃಷ್ಣ ಆಶ್ರಮದ ವತಿಯಿಂದ ಪಾಲಿಬೆಟ್ಟ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಆಶ್ರಮದ ಸ್ವಾಮೀಜಿ ಭೂಪೇಂದ್ರನಾಥ, ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿ ಸಮಾಜದಲ್ಲಿ ಉನ್ನತ ಸ್ಥಾನವನ್ನು ನಿರ್ವಹಿಸಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯೆ ಡಾ. ಕೆ.ಎಂ. ಭವಾನಿ, ಉಪನ್ಯಾಸಕರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಸೋಮವಾರಪೇಟೆ: ಇಲ್ಲಿನ ಬಿಎಸ್‍ಎಸ್ ಫೈನಾನ್ಸ್ ವತಿಯಿಂದ ಪಟ್ಟಣದ ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಬ್ಯಾಗ್‍ಗಳನ್ನು ವಿತರಿಸಲಾಯಿತು.
ಶಾಲೆಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಸರ್ಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಪಿ.ಮೂರ್ತಿ, ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಿದ್ದರೂ ಇಚ್ಚಾಶಕ್ತಿಯ ಕೊರತೆಯಿಂದ ಹಿಂದೆ ಬೀಳುತ್ತಿರುವದು ಬೇಸರದ ವಿಚಾರ ಎಂದರು.
ಬಿಎಸ್‍ಎಸ್ ಸಂಸ್ಥೆಯ ವಲಯ ಅಧಿಕಾರಿ ಯಶವಂತ್ ಮಾತನಾಡಿ, ಪ್ರಾಕೃತಿಕ ವಿಕೋಪದಿಂದ ತೊಂದರೆಗೊಳಗಾಗಿದ್ದ ಕೊಡಗಿನ 24 ಶಾಲೆಗಳನ್ನು ಆಯ್ಕೆ ಮಾಡಲಾಗಿದ್ದು, ತಾ. 18 ರಿಂದ 21 ರವರೆಗೆ 2000 ಉಚಿತ ಬ್ಯಾಗ್‍ಗಳನ್ನು ವಿತರಿಸುವದಾಗಿ ಹೇಳಿದರು.
ಕೊಡಗು ಜಿಲ್ಲಾ ಕಸಾಪ ಕೋಶಾಧ್ಯಕ್ಷ ಎಸ್.ಎ. ಮುರಳೀಧರ್, ಸಿಆರ್‍ಪಿ ಸತೀಶ್, ಎಸ್‍ಡಿಎಂಸಿ ಅಧ್ಯಕ್ಷ ಕುಶಾಲ, ಉಪಾಧ್ಯಕ್ಷೆ ಪೌಲಿನ್, ಬಿಎಸ್‍ಎಸ್ ಸಂಸ್ಥೆಯ ಸಿಬ್ಬಂದಿ ಸಿದ್ಧರಾಜ, ಪ್ರದೀಪ್, ಶಿಕ್ಷಕ ಮಧುಸೂದನ್, ಮುಖ್ಯ ಶಿಕ್ಷಕಿ ಅಣ್ಣಮ್ಮ, ಶಿಕ್ಷಕಿ ದಿವ್ಯಾ ಮತ್ತಿತರರು ಉಪಸ್ಥಿತರಿದ್ದರು.ಸುಂಟಿಕೊಪ್ಪ: ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರು ಬಿಎಸ್‍ಎಸ್ ಮೈಕ್ರೋ ಫೈನಾನ್ಸ್‍ನ ಕುಶಾಲನಗರ ಶಾಖೆಯ ವತಿಯಿಂದ ಉಚಿತವಾಗಿ ಶಾಲಾ ಬ್ಯಾಗ್‍ಗಳನ್ನು ವಿತರಿಸಲಾಯಿತು.
ಇಲ್ಲಿನ ಸರಕಾರಿ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಲಾದ ಸಮಾರಂಭದಲ್ಲಿ ಸಂಸ್ಥೆಯ ವಲಯಾಧಿಕಾರಿ ಕೆ. ಹೊನ್ನಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್, ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಾಲಕೃಷ್ಣ, ಪ್ರೌಢಶಾಲೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರು ಭಾಗವಹಿಸಿ ಮಾತನಾಡಿದರು.
ವೇದಿಕೆಯಲ್ಲಿ ಸರಕಾರಿ ಮಾದರಿ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶೇಖರ್, ಮುಖ್ಯ ಶಿಕ್ಷಕಿ ಗೀತಾ, ಸಂಸ್ಥೆಯ ಸಹಾಯಕ ವಲಯಾಧಿಕಾರಿ ಸುರೇಶ್ ಕುಮಾರ್, ವ್ಯವಸ್ಥಾಪಕ ಕೆ.ಎಸ್. ಶಿವಕುಮಾರ್, ಲೆಕ್ಕ ಪರಿಶೋಧಕ ಪ್ರಶಾಂತ್, ಶಿಕ್ಷಕ ಟಿ.ಜಿ. ಪ್ರೇಮಕುಮಾರ್ ಮೊದಲಾದವರು ಇದ್ದರು.ಕೂಡಿಗೆ: ಯಡವಾರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ಯಡವಾರೆ ಗ್ರಾಮದ ಕಾಫಿ ಬೆಳೆಗಾರರಾದ ಚೆÀರಿಯಮನೆ ಮಿಟ್ಟು ಪೊನ್ನಪ್ಪ ಅವರು ರೂ. 10 ಸಾವಿರ ಬೆಲೆ ಬಾಳುವ ಪುಸ್ತಕ ಹಾಗೂ ಲೇಖನಿಯ ಸಾಮಗ್ರಿಗಳನ್ನು ವಿತರಿಸಿದರು. ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಎಂ.ಟಿ. ಜನಾರ್ಧನ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕ ಕುಮಾರ ಹಾಗೂ ಸಹ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.
ಕುಶಾಲನಗರ: ಕುಶಾಲನಗರ ಐಶ್ವರ್ಯ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭವನ್ನು ಏರ್ಪಡಿಸಲಾಗಿತ್ತು.
ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಜೋಯಪ್ಪ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಪುಲಿಯಂಡ ರಾಮ್ ದೇವಯ್ಯ ಮತ್ತಿತರರು ಹಾಜರಿದ್ದರು.
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಸಮೂಹ ಗಾಯನ, ನೃತ್ಯ ಮನರಂಜನಾ ಕಾರ್ಯಕ್ರಮಗಳು ನಡೆದವು. ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆಟೋಟ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ಕಾಲೇಜಿನ ಬೋಧಕ, ಬೋಧಕೇತರ ವರ್ಗದವರು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳಾದ ಸೂರ್ಯಪ್ರತಾಪ್, ಆದೇಶ್ ಕಾರ್ಯಕ್ರಮ ನಿರೂಪಿಸಿದರು.