ಕುಶಾಲನಗರ, ಜೂ. 22: ಹಾರಂಗಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯವಂತ ಶಿಶು ಪ್ರದರ್ಶನ ಕಾರ್ಯಕ್ರಮ ನಡೆಯಿತು. ಪೋಷಕರು ತಮ್ಮ ಮಕ್ಕಳೊಂದಿಗೆ ಪಾಲ್ಗೊಂಡಿದ್ದರು. ಸ್ಪರ್ಧೆಯಲ್ಲಿ ಆಯ್ಕೆಯಾದ ಆರೋಗ್ಯವಂತ ಮಕ್ಕಳಿಗೆ ಬಹುಮಾನ ವಿತರಣೆ ನಡೆಯಿತು.
ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಆರೋಗ್ಯವಂತ ಮಕ್ಕಳ ಆಯ್ಕೆ ನಡೆಸಿದರು. ಕೂಡಿಗೆ ಗ್ರಾ.ಪಂ. ಸದಸ್ಯ ಭಾಸ್ಕರ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಮುಖೇಶ್, ಆರೋಗ್ಯ ಶುಶ್ರೂಷಕಿ ಶಾಂತಕುಮಾರಿ, ಆಶಾ ಕಾರ್ಯಕರ್ತೆ ಸುಲೇಖ ಹಾಗೂ ಶಶಿ ಇದ್ದರು.