ಶ್ರೀಮಂಗಲ, ಜೂ. 22 : ದಕ್ಷಿಣ ಕೊಡಗಿನಾದ್ಯಂತ ಶನಿವಾರ ಮಧ್ಯಾಹ್ನ ಉತ್ತಮ ಮಳೆಯಾಗಿದೆ. ಪೆÇನ್ನಂಪೇಟೆ, ಕಾನೂರು, ಬಿರುನಾಣಿ, ಟಿ. ಶೆಟ್ಟಿಗೇರಿ, ಶ್ರೀಮಂಗಲ, ಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದೆ.
ದಕ್ಷಿಣ ಕೊಡಗಿನ ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ಕಳೆದ 4 ದಿನಗಳಿಂದ ರಾತ್ರಿ ಸಮಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬಿರುನಾಣಿ, ಹುದಿಕೇರಿ, ಟಿ.ಶೆಟ್ಟಿಗೇರಿ ಮತ್ತು ಶ್ರೀಮಂಗಲ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿಯಿಡಿ ಮಳೆಯಾಗಿದೆ. ಬಿರುನಾಣಿಯಲ್ಲಿ ಹುಟ್ಟಿ ಹರಿಯುವ ಕಕ್ಕಟ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಶನಿವಾರ ದಕ್ಷಿಣ ಕೊಡಗಿನ ವ್ಯಾಪ್ತಿಯಲ್ಲಿ ಮೋಡ ಮುಸುಕಿದ ವಾತಾವರಣ ಇತ್ತು. ಮಧ್ಯಾಹ್ನದ ನಂತರ ಬಹುತೇಕ ದಕ್ಷಿಣ ಕೊಡಗಿನಾದ್ಯಂತ ಉತ್ತಮ ಮಳೆಯಾಗಿದೆ.