ಮಡಿಕೇರಿ, ಜೂ.22: ಪ್ರಸಕ್ತ(2019-20) ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹಧನ ಮಂಜೂರು ಮಾಡಲಾಗುತ್ತಿದ್ದು, ಪ್ರಥಮ ಪ್ರಯತ್ನದಲ್ಲಿ ಶೇ.60-74.99 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ರೂ.7 ಸಾವಿರಗಳನ್ನು ಮತ್ತು ಶೇ.75 ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ರೂ.15 ಸಾವಿರಗಳನ್ನು ಮಂಜೂರು ಮಾಡಲಾಗುತ್ತಿದೆ.

ಈ ಪ್ರೋತ್ಸಾಹಧನವನ್ನು ಪಡೆಯಲು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆ ಹಾಗೂ ಇತರೆ ವಿವರಗಳನ್ನು ಇಲಾಖೆಯ ವೆಬ್‍ಸೈಟ್: ತಿತಿತಿ.ಣತಿ.ಞಚಿಡಿ.ಟಿiಛಿ.iಟಿ ನಲ್ಲಿ ಆನ್‍ಲೈನ್ ಮೂಲಕ ತಪ್ಪದೇ ನೋಂದಾಯಿಸಿಕೊಳ್ಳುವದು. ಆನ್‍ಲೈನ್ ಮೂಲಕ ನೋಂದಾಯಿಸಿಕೊಳ್ಳಲು ಡಿಸೆಂಬರ್ 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯ, ನಿರ್ದೇಶಕರ ಕಚೇರಿ, 1ನೇ ಮಹಡಿ, ಲೋಟಸ್ ಟವರ್ಸ್, ರೇಸ್‍ಕೋರ್ಸ್ ರಸ್ತೆ, ಬೆಂಗಳೂರು ದೂ.ಸಂಖ್ಯೆ : 080-22261787 ಇಲಾಖಾ ದೂರವಾಣಿ -080-22261789 ಅಥವಾ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ-08274-261261, ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-08272-223552, ಸಹಾಯಕ ನಿರ್ದೇಶಕರು (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ-08276-281115 ಹಾಗೂ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ-08272-229983 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಅವರು ತಿಳಿಸಿದ್ದಾರೆ.