ಮಡಿಕೇರಿ, ಜೂ.22: 2019-20 ನೇ ಸಾಲಿನ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (ಪಿ.ಎಂ.ಇ.ಜಿ.ಪಿ) ಕಾರ್ಯಕ್ರಮದಡಿಯಲ್ಲಿ ಕೈಗಾರಿಕೆ, ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ. 18 ವರ್ಷ ತುಂಬಿದ ಅರ್ಹ ಅಭ್ಯರ್ಥಿಗಳು ತಿತಿತಿ.ಞviಛಿ.oಡಿg.iಟಿ (ಠಿmegಠಿ oಟಿಟiಟಿe ಚಿಠಿಠಿಟiಛಿಚಿಣioಟಿ) ನಲ್ಲಿ ಅರ್ಜಿಗಳನ್ನು ಅಳವಡಿಸಿ ಅದರ ಪ್ರತಿಯನ್ನು 2 ಸೆಟ್‍ನಲ್ಲಿ ದಾಖಲಾತಿಗಳನ್ನು ಈ ಕಚೇರಿಗೆ ಸಲ್ಲಿಸುವದು. ಅಪೂರ್ಣವಾಗಿ ಭರ್ತಿ ಮಾಡಿದ ಹಾಗೂ ದಾಖಲೆಗಳನ್ನು ನೀಡದೆ ಇರುವ ಅರ್ಜಿ ಪರಿಗಣಿಸಲಾಗುವದಿಲ್ಲ. ಅರ್ಜಿ ಸಲ್ಲಿಸಲು ಜುಲೈ 12 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ ಇವರ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ: 08272-228431 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.