ಮಡಿಕೇರಿ, ಜೂ. 22: ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯು ರೈತರಿಗೆ ಹೆಚ್ಚಿನ ಅನುಕೂಲವಾಗುವಂತೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮರು ವಿನ್ಯಾಸಗೊಳಿಸಿದ ಹವಮಾನ ಆಧಾರಿತ ಬೆಳೆ ವಿಮೆ (ಖ-WಃಅIS) ಯೋಜನೆಯ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಅತಿವೃಷ್ಠಿ ಹಾಗೂ ಅನಾವೃಷ್ಠಿ ಆದ ಸಂದರ್ಭದಲ್ಲಿ ಹವಮಾನ ಆಧಾರಿತ ಬೆಳೆ ವಿಮೆಯ ಅನುಕೂಲಗಳನ್ನು ರೈತರಿಗೆ ತಿಳಿಸಿ ಹೆಚ್ಚಿನ ಅನುಕೂಲವಾಗುವಂತೆ ಕಾರ್ಯ ಪ್ರವೃತ್ತರಾಗುವಂತೆ ತೋಟಗಾರಿಕ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಕುರಿತ ಮಾಹಿತಿ ನೀಡಿ, ಈ ಯೋಜನೆಯು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆಯು ಮಳೆ ಬಿದ್ದ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನೀಡಲಾಗುವದು. ಮಳೆ ಪ್ರಮಾಣ ಆದರಿಸಿ ಮತ್ತು ವ್ಶೆಜ್ಞಾನಿಕ ಆಧಾರದ ಮೇಲೆ ಬೆಳೆ ವಿಮೆ ಪರಿಹಾರ ಮೊತ್ತವನ್ನು ರೈತರಿಗೆ ನೀಡಲಾಗುವದು. 2016-17ರಲ್ಲಿ ಈ ಯೋಜನೆಯಡಿ ವಿಮೆ ಪರಿಹಾರ ವಿತರಿಸಿದ ಮಾಹಿತಿಯನ್ನು ಸಭೆಗೆ ನೀಡಿದರು.

ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಾಜು, ತೋಟಗಾರಿಕ ಇಲಾಖೆಯ ಸಹಾಯಕ ನಿರ್ದೇಶಕ ಪ್ರಮೋದ್, ಲೀಡ್ ಬ್ಯಾಂಕ್ ಮುಖ್ಯ ಪ್ರಬಂಧಕರಾದ ಗುಪ್ತಾಜೀ, ಭಾರತೀಯ ತೋಟಗಾರಿಕೆ ಸಂಶೋಧನ ಕೇಂದ್ರ ಹಾಗೂ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು, ವಿಮಾ ಸಂಸ್ಥೆಯ ಪ್ರತಿನಿಧಿಗಳು ಇತರರು ಇದ್ದರು.