ಸೋಮವಾರಪೇಟೆ,ಜೂ.24: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಈರ್ವರು ಆರೋಪಿಗಳನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿದ್ದು, 15 ಲೀಟರ್ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.

ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವಾರೆ ಗ್ರಾಮದ ನಿವಾಸಿ ಒ.ಆರ್. ಶಶಿ ತಮ್ಮ ಅಂಗಡಿಯಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ 4 ಲೀಟರ್ ಮದ್ಯ ಹಾಗೂ ಅದೇ ಗ್ರಾಮದ ಎನ್.ಜಿ. ಚಂದ್ರಶೇಖರ್ ತಮ್ಮ ಅಂಗಡಿಯಲ್ಲಿ ಇಟ್ಟಿದ್ದ 11 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರ ುಪಡಿಸಲಾಗಿದ್ದು, ನ್ಯಾಯಾಧೀಶರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಶಿವಶಂಕರ್, ಸಿಬ್ಬಂದಿಗಳಾದ ನವೀನ್, ಮಂಜುನಾಥ್, ಕೇಶವ ಅವರುಗಳು ಭಾಗವಹಿಸಿದ್ದರು.