ಸೋಮವಾರಪೇಟೆ, ಜೂ. 24: ಕಳೆದ ಸಾಲಿನಲ್ಲಿ ಜರುಗಿದ ಪ್ರಾಕೃತಿಕ ವಿಕೋಪ ಹಿನ್ನೆಲೆ ಕೊಡಗು ಜಿಲ್ಲೆಯ ರೈತರು ತೀರಾ ಸಂಕಷ್ಟಕ್ಕೆ ಈಡಾಗಿದ್ದು, ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ರೈತರಿಗೆ ಕೃಷಿ ಕಾರ್ಯ ಕೈಗೊಳ್ಳಲು ಉಚಿತವಾಗಿ ರಸಗೊಬ್ಬರ ವಿತರಿಸಲು ಕ್ರಮ ಕೈಗೊಳ್ಳುವಂತೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್‍ನ ಪದಾಧಿಕಾರಿಗಳು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರಿಗೆ ಮನವಿ ಮಾಡಿದರು.

ಬೆಂಗಳೂರಿನ ನಿವಾಸದಲ್ಲಿ ಸಚಿವರನ್ನು ಭೇಟಿ ಮಾಡಿದ ಪದಾಧಿಕಾರಿಗಳು, ಕೊಡಗಿನ ಬೆಳೆಗಾರರು ಮತ್ತು ರೈತರ ಹಿತದೃಷ್ಟಿಯಿಂದ ಉಚಿತವಾಗಿ ಗೊಬ್ಬರ ವಿತರಿಸಲು ಕ್ರಮ ಕೈಗೊಳ್ಳಬೇಕು. ರೈತರಿಗೆ ಇನ್ನಷ್ಟು ಸವಲತ್ತುಗಳನ್ನು ಒದಗಿಸಬೇಕು ಎಂದು ಮನವಿ ಸಲ್ಲಿಸಿದರು.

ಈ ಸಂದರ್ಭ ಅಸೋಸಿಯೇಷನ್ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ, ಕಾರ್ಯಕರ್ತ ರುಗಳಾದ ಸಜನ್ ಮಂದಣ್ಣ, ಅಭೀಷೇಕ್ ಗೋವಿಂದಪ್ಪ, ರಕ್ಷಿತ್, ವಿಕಾಸ್, ಅರುಣ್, ಸ್ವಾಗತ್, ಹೇಮಂತ್, ಅಪೂರ್ವನ್ ಉಪಸ್ಥಿತರಿದ್ದರು.