ಮಡಿಕೇರಿ, ಜೂ. 24: ಕುಷ್ಠರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಕುಷ್ಠರೋಗ ವಿಭಾಗದ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾ ಆಸ್ವತ್ರೆ ಸಭಾಂಗಣದಲ್ಲಿ ನಡೆಯಿತು.

ಕುಷ್ಠರೋಗ ಕಾರ್ಯಕ್ರಮ ಅಧಿಕಾರಿ ಡಾ. ಆನಂದ್ ಅವರು ಕುಷ್ಠರೋಗ ನಿಯಂತ್ರಣ ಹಾಗೂ ನಿರ್ಮೂಲನೆ ಮಾಡುವಲ್ಲಿ ಎಲ್ಲರ ಸಹಕಾರ ಅಗತ್ಯ ಎಂದರು.

ಕೊಡಗಿನಲ್ಲ್ಲಿ 4 ಕುಷ್ಠರೋಗಿಗಳಿದ್ದು, ಅದರಲ್ಲಿ ಪ್ರಸ್ತುತ ಜೂನ್ ತಿಂಗಳಿನಲ್ಲಿ 2 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕುಷ್ಠರೋಗ ನಿರ್ಮೂಲನೆ ವಿಭಾಗದ ಜಂಟಿ ನಿರ್ದೇಶಕ ಡಾ. ಮುನಿರಾಜ್ ಮಾತನಾಡಿ, ಕುಷ್ಠರೋಗದಲ್ಲಿ ನೋವು ರಹಿತ ರೋಗ ಸ್ವರ್ಶಜ್ಞಾನ, ನೋವು, ನವೆ ಇಲ್ಲದ ತಿಳಿ ಬಿಳಿ ತಾಮ್ರವರ್ಣದ ಮಚ್ಚೆ, ಕೈ ಕಾಲುಗಳಲ್ಲಿ ಜೋಮು ಉಂಟಾಗುವದು ಮುಖ ಅಥವಾ ಕಿವಿಯ ಚರ್ಮದ ಮೇಲೆ ಗಂಟು ಕಾಣಿಸಿಕೊಳ್ಳುತ್ತದೆ ಎಂದು ಮಾಹಿತಿ ನೀಡಿದರು.

ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳು ಮತ್ತು ವೈದ್ಯಾಧಿಕಾರಿಗಳು ಮತ್ತು ಕ್ಷೇತ್ರ ಮಟ್ಟದ ಸಿಬ್ಬಂದಿಗಳು ಎಲ್ಲರೂ ಬೆಂಬಲವಾಗಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.