ಮಡಿಕೇರಿ, ಜೂ. 23: ಜಿಲ್ಲೆಗೆ ಸುಸಜ್ಜಿತ ಆಸ್ಪತ್ರೆ ಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಉನೈಸ್ ಪೆರಾಜೆ ಅವರು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಸರಕಾರ ತಕ್ಷಣ ಕೊಡಗು ಜಿಲ್ಲೆಗೆ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಿಕೊಡಬೇಕೆಂದು ಮನವಿ ಮಾಡಿಕೊಳ್ಳಲಾಗಿದೆ. ಈ ಮನವಿಗೆ ಮುಖ್ಯಮಂತ್ರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಿದ್ದಾರೆ ಎಂದು ಉನೈಸ್ ಪೆರಾಜೆ ತಿಳಿಸಿದರು.
ರಾಮನಗರ ಜಿಲ್ಲೆಯ ಮಳೂರು ಹೋಬಳಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ಸಂದರ್ಭ ರಾಮನಗರ ಜಿಲ್ಲಾಧ್ಯಕ್ಷ ಶಿವುಗೌಡ ಹಾಜರಿದ್ದರು.