ಸಿದ್ದಾಪುರ, ಜೂ. 23: ನೆಲ್ಯಹುದಿಕೇರಿ ಗ್ರಾ.ಪಂ ವತಿಯಿಂದ ನೂತನ ಅಂಚೆ ಕಚೇರಿಯನ್ನು ಗ್ರಾ.ಪಂ ಅಧ್ಯಕ್ಷೆ ಪದ್ಮಾವತಿ ಉದ್ಘಾಟಿಸಿದರು.
ಈ ಸಂದರ್ಭ ಪಿ.ಡಿ.ಓ. ನಂಜುಂಡಸ್ವಾಮಿ ಮಾತನಾಡಿ ಗ್ರಾಮಸ್ಥರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗ್ರಾ.ಪಂ. ವತಿಯಿಂದ ಅಂಚೆ ಕಚೇರಿಯನ್ನು ನಿರ್ಮಾಣ ಮಾಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿ.ಪಂ ಸದಸ್ಯೆ ಸುನಿತಾ ಮಂಜುನಾಥ್, ತಾ.ಪಂ. ಸದಸ್ಯೆ ಸುಹದಾ ಅಶ್ರಫ್, ಗ್ರಾ.ಪಂ ಉಪಾಧ್ಯಕ್ಷೆ ಸಫಿಯ ಹಾಗೂ ಗ್ರಾ.ಪಂ ಸದಸ್ಯರು ಹಾಜರಿದ್ದರು.