ಕೂಡಿಗೆ, ಜೂ. 23: ಕೂಡುಮಂಗಳೂರು ಗ್ರಾಮ ಸಭೆಯು ಸಂತೆಮಾರುಕಟ್ಟೆ ಆವರಣದಲ್ಲಿ ನಡೆಯಿತು.
ಕಂದಾಯ ಇಲಾಖೆಯ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು. ಅನೇಕ ಗ್ರಾಮಸ್ಥರಿಗೆ ಹಕ್ಕು ಪತ್ರ ವಿತರಣೆ ಅಗಿಲ್ಲ, ತುರ್ತಾಗಿ ವಿತರಣೆ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದರು. ಕೂಡುಮಂಗಳೂರು ಗ್ರಾಮದಲ್ಲಿ ಶುಧ್ಧ ಕುಡಿಯುವ ನೀರಿನ ಘಟಕವನ್ನು ಪ್ರಾರಂಭಿಸುವಂತೆ ಸಭೆಯಲ್ಲಿ ಗ್ರಾಮಸ್ಥರು ಒತ್ತಾಯಿಸಿದರು. ಚಿಕ್ಕತ್ತೂರು ಬೆಂಡೆಬೆಟ್ಟ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಇರುವದರಿಂದ ವಿದ್ಯುತ್ ಕಂಬ ಅಳವಡಿಸಬೇಕೆಂದು ಮನವಿ ಮಾಡಿದರು. ಪಶು ಆಸ್ಪತ್ರೆಯನ್ನು ತೆರೆಯುವಂತೆ ಈ ಸಭೆಯ ಮೂಲಕ ಆಗ್ರಹಿಸಿದರು. ಉಳಿದಂತೆ ಮಹಾತ್ಮಾಗಾಂದಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ, ಕ್ರಿಯಾಯೋಜನೆಯಂತೆ ಕಾಮಗಾರಿ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಯಿತು. ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ಸತ್ಯಮೇವ ಜಯತೆ ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ಶಾಲಾ ಮಕ್ಕಳಿಗೆ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕಿ ಕಾವ್ಯ ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ಸಭೆಯಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರು, ಜಿಲ್ಲಾ ಪಂಚಾಯತ್ ಸದಸೆÀ್ಯ ಮಂಜುಳಾ, ತಾಲೂಕು ಪಂಚಾಯತಿ ಸದಸ್ಯ. ಗಣೇಶ ಸೇರಿದಂತೆ ಸರ್ವ ಸದಸ್ಯರು ಹಾಜರಿದ್ದರು.