ಸೋಮವಾರಪೇಟೆ, ಜೂ. 23: ಕೋವರ್‍ಕೊಲ್ಲಿ ಟಾಟಾ ಕಾಫಿ ಸಂಸ್ಥೆಯ ಸಭಾಂಗಣದಲ್ಲಿ ಕಾರ್ಮಿಕರಿಗೆ ಧೂಮಪಾನ ಹಾಗೂ ಮದ್ಯಪಾನದ ದುಷ್ಪರಿಣಾಮದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರಕ್ಕೆ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಶಿವಪ್ರಸಾದ್ ಚಾಲನೆ ನೀಡಿದರು. ನಂತರ ಮಾತನಾಡಿ, ಧೂಮಪಾನ ಮತ್ತು ಮದ್ಯಪಾನದಿಂದ ಜನರ ಆರೋಗ್ಯ ಹಾಗೂ ಕುಟುಂಬದ ನೆಮ್ಮದಿ ಹಾಳಾಗುತ್ತಿದ್ದು, ಕಾರ್ಮಿಕರು ಇದರಿಂದ ದೂರ ಇರಬೇಕೆಂದು ಸಲಹೆ ನೀಡಿದರು. ಸಂಸ್ಥೆಯ ಹಿರಿಯ ವ್ಯವಸ್ಥಾಪಕ ಎಂ.ಬಿ. ಮುತ್ತಣ್ಣ ಮಾತನಾಡಿ, ಕಾರ್ಮಿಕರು ಮದ್ಯ ಮತ್ತು ಧೂಮಪಾನದ ಚಟಕ್ಕೆ ಬಲಿಯಾಗದೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದರು. ವೇದಿಕೆಯಲ್ಲಿ ಸಂಸ್ಥೆಯ ಮಂಜುಳ, ಲೋಹಿತ್ ಉಪಸ್ಥಿತರಿದ್ದರು.