ಕರಿಕೆ, ಜೂ. 24: ಇಲ್ಲಿಗೆ ಸಮೀಪದ ಎಳ್ಳುಕೊಚ್ಚಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣಾ ಶಿಬಿರವನ್ನು ನಡೆಸಲಾಯಿತು. ಭಾಗಮಂಡಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ. ಪೊನ್ನಮ್ಮ ಸುಮಾರು ಇಪ್ಪತ್ತು ಜನರ ತಪಾಸಣೆ ನಡೆಸಿದರು. ಪ್ರತಿ ಮಂಗಳವಾರ ಹಾಗೂ ಶುಕ್ರವಾರ ರೋಗಿಗಳಿಗೆ ಚಿಕಿತ್ಸೆಗೆ ಲಭ್ಯವಿರುವದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಜಿ.ಪಂ. ಸದಸ್ಯೆ ಕವಿತಾ ಪ್ರಭಾಕರ್, ಗ್ರಾಮ ಪಂಚಾಯಿತಿ ಸದಸ್ಯರು, ಆಶಾ ಕಾರ್ಯಕರ್ತೆಯರು, ದಾದಿಯರು ಪಾಲ್ಗೊಂಡಿದ್ದರು.