ಶನಿವಾರಸಂತೆ, ಜೂ. 24: ಪಟ್ಟಣದ ವಿಘ್ನೇಶ್ವರ ವಿದ್ಯಾಸಂಸ್ಥೆಯ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ತಾ. 21 ರಂದು ಹೊಸ ವಿದ್ಯಾರ್ಥಿನಿಯರ ಸ್ವಾಗತ ಸಮಾರಂಭ ಹಾಗೂ ಸರಸ್ವತಿ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು.

ಸಮಾರಂಭವನ್ನು ಸಂಸ್ಥೆ ಅಧ್ಯಕ್ಷ ಬಿ.ಕೆ. ಸುಬ್ರಮಣ್ಯ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿನಿಯರಿಗೆ ಶುಭ ಹಾರೈಸಿದರು. ಸಂಸ್ಥೆ ಉಪಾಧ್ಯಕ್ಷ ಕೃಷ್ಣರಾಜ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದು, ವಿದ್ಯಾರ್ಥಿನಿಯರಿಗೆ ಹಿತವಚನ ನೀಡಿದರು.

ಈ ಸಂದರ್ಭ ಸರಸ್ವತಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ ಚುನಾವಣೆ ನಡೆದು ಕಾಲೇಜು ನಾಯಕಿಯಾಗಿ ಎಸ್.ಎನ್. ಸುಶ್ಮಿತಾ, ಉಪನಾಯಕಿಯಾಗಿ ವಿ.ವಿ. ಸೌಜನ್ಯ ಆಯ್ಕೆಯಾದರು.

ಸಂಸ್ಥೆ ನಿರ್ದೇಶಕಿ ನಿತ್ಯಾನಿಧಿ, ಕಾಲೇಜು ಪ್ರಾಂಶುಪಾಲ ಟಿ.ಪಿ. ಶಿವಪ್ರಕಾಶ್, ಉಪನ್ಯಾಸಕರು, ಪ್ರೌಢಶಾಲಾ ವಿಭಾಗದ ಶಿಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.