ಜಿಲಾ ್ಲ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಶಕ್ತಿಧಾಮ ಮಾದಕ ವ್ಯಸನಿಗಳ ಸಮಗ್ರ ಪುನರ್ವಸತಿ ಕೇಂದ್ರ, ಗ್ರೀನ್ ಡಾಟ್ ಟ್ರಸ್ಟ್, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಜಿಲ್ಲಾ ವಿಶೇಷಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಬೆಳಿಗ್ಗೆ 10 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.

ಜಿ.ಪಂ. ಸಿಇಒ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ. ಮೋಹನ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ಎನ್. ಆನಂದ್, ವಕೀಲರ ಸಂಘದ ಅಧ್ಯಕ್ಷ ಕೆ.ಎಸ್. ಕವನ್, ವಿಶೇಷಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಆರ್. ಸಂಪತ್ ಕುಮಾರ್, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಡಾ. ಟಿ.ಡಿ. ತಿಮ್ಮಯ್ಯ, ಶಕ್ತಿ ಅಸೋಷಿಯೇಷನ್ ವ್ಯವಸ್ಥಾಪಕರ ನಿರ್ದೇಶಕ ಡಾ. ವಿ.ಎಂ. ಶಶಿಕುಮಾರ್, ಗ್ರೀನ್ ಡಾಟ್ ಟ್ರಸ್ಟ್‍ನ ಕಾರ್ಯದರ್ಶಿ ಡಾ. ಸಿ.ಕೆ. ಕಾಂತರಾಜ್ ಇತರರು ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಮನೋವೈದ್ಯ ಡಾ. ಡೇವಿನ್ ಲಿನೇಕರ್ ಕರ್ಕಡ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳು ಕುರಿತು ಉಪನ್ಯಾಸ ನೀಡಲಿದ್ದಾರೆ.