ನಾಪೆÇೀಕ್ಲು, ಜೂ. 25: ಅಂಕುರ್ ಪಬ್ಲಿಕ್ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಆರಂಭಿಸಲಾದ ಸ್ಪೆಕ್ಟ್ರಮ್ ವಿಜ್ಞಾನ ಸಂಘವನ್ನು ವಿದ್ಯಾಸಂಸ್ಥೆಯ ಕಾರ್ಯದರ್ಶಿ ಕೇಟೋಳಿರ ರತ್ನಾ ಚರ್ಮಣ್ಣ ಉದ್ಘಾಟಿಸಿದರು. ನಂತರ ವಿದ್ಯಾರ್ಥಿಗಳಿಂದ ತರಿಸಲಾದ ಔಷಧೀಯ ಗುಣಗಳುಳ್ಳ ಸಸಿಗಳನ್ನು ಶಾಲಾ ಆವರಣದಲ್ಲಿ ನೆಡಲಾಯಿತು. ಈ ಸಂದರ್ಭ ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಜರಿದ್ದರು.