ಮಡಿಕೇರಿ, ಜೂ. 25: ಗೋಣಿಕೊಪ್ಪ ಉಪ ವಿಭಾಗದ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸಲು ಸಭೆಯು ತಾ. 29 ರಂದು ಬೆಳಗ್ಗೆ 10.30 ಗಂಟೆಯಿಂದ 12 ಗಂಟೆವರೆಗೆ ಗೋಣಿಕೊಪ್ಪಲು ಉಪವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ.
ವೀರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸಲು ಸಭೆಯು ತಾ. 29 ರಂದು ಮಧ್ಯಾಹ್ನ 2.30 ಗಂಟೆಯಿಂದ 4 ಗಂಟೆವರೆಗೆ ವಿರಾಜಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ.