ಗುಡ್ಡೆಹೊಸೂರು, ಜೂ. 25: ಇಲ್ಲಿನ ಪಂಚಾಯಿತಿಯ ತುರ್ತು ಗ್ರಾಮ ಸಭೆ ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷೆ ಕೆ.ಎಸ್. ಭಾರತಿ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಮುಂದಿನ ಗ್ರಾಮ ಸಭೆಯನ್ನು ನಡೆಸುವ ದಿನಾಂಕವನ್ನು ನಿಗದಿಪಡಿಸಲಾಯಿತು. ಅಲ್ಲದೆ ಹಲವಾರು ಸಮಸ್ಯೆಗಳ ಬಗ್ಗೆ ಆಯಾ ವಿಭಾಗದ ಸದಸ್ಯರು ಸಭೆಯ ಗಮನಕ್ಕೆ ತಂದರು.
ಸುಣ್ಣದ ಕೆರೆ ಗ್ರಾಮದಲ್ಲಿ ಅಂಗನವಾಡಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು ಈ ಜಾಗವನ್ನು ಪಂಚಾಯಿತಿ ವತಿಯಿಂದ ತೆರವುಗೊಳಿಸಿಕೊಡಬೇಕೆಂದು ಸುಣ್ಣದ ಕೆರೆ ಗ್ರಾಮಸ್ಥರು ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದ ಘಟನೆ ನಡೆಯಿತು. ನಂತರ ಸ್ಥಳಕ್ಕೆ ಪಂಚಾಯಿತಿ ಅಧಿಕಾರಿಗಳು ಅಧ್ಯಕ್ಷರು ಸದಸ್ಯರು ಭೇಟಿ ನೀಡಿ ಸಮಸ್ಯೆ ಬಗೆಹರಿಸುವದಾಗಿ ಭರವಸೆ ನೀಡಿದ ಬಳಿಕ ಗ್ರಾಮಸ್ಥರು ಪ್ರತಿಭಟನೆ ಕೈಬಿಟ್ಟರು. ಈ ಸಂದÀರ್ಭ ಪಿ.ಡಿ.ಓ. ಶ್ಯಾಂ ಮತ್ತು ಕಾರ್ಯದರ್ಶಿ ನಂಜುಂಡಸ್ವಾಮಿ ಮತ್ತು ಸದಸ್ಯರು ಹಾಜರಿದ್ದರು.