ಮಡಿಕೇರಿ, ಜೂ. 25: ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2019-20ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ಕಾನೂನು ಪದವೀಧರರಿಗೆ ನುರಿತ ವಕೀಲರಿಂದ ತರಬೇತಿ ನೀಡಲು ಮಾಸಿಕ ರೂ. 5 ಸಾವಿರಗಳ ತರಬೇತಿ ಭತ್ಯೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‍ಸೈಟ್ ತಿತಿತಿ.goಞಜom.ಞಚಿಡಿ.ಟಿiಛಿ.iಟಿ ನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08272-225528/220214 ಹಾಗೂ ತರಬೇತಿ ಪಡೆಯ ಬಯಸುವ ಅಭ್ಯರ್ಥಿಗಳು ಜಿಲ್ಲಾ ಅಲ್ಪಸಂಖ್ಯಾತರ ಇಲಾಖಾ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವೀನ್ ತಿಳಿಸಿದ್ದಾರೆ.

ವಿದೇಶ ವ್ಯಾಸಂಗ ವಿದ್ಯಾರ್ಥಿ ವೇತನಕ್ಕೆ

ಪ್ರಸಕ್ತ (2019-20) ಸಾಲಿನ ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶ ವ್ಯಾಸಂಗ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಇಲಾಖಾ ವೆಬ್‍ಸೈಟ್ ತಿತಿತಿ.goಞಜom.ಞಚಿಡಿ.ಟಿiಛಿ.iಟಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ, ಅರ್ಜಿ ಪ್ರತಿಯನ್ನು ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ದಾಖಲಾತಿಯೊಂದಿಗೆ ಜುಲೈ 18 ರೊಳಗೆ ಬೆಂಗಳೂರಿನ ಕೇಂದ್ರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‍ಸೈಟ್ ತಿತಿತಿ.goಞಜom.ಞಚಿಡಿ.ಟಿiಛಿ.iಟಿ, ದೂರವಾಣಿ ಸಂಖ್ಯೆ 08272-225528/ 220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

ಸಾಲ ಸೌಲಭ್ಯಕ್ಕೆ

ಪ್ರಸಕ್ತ (2019-20) ಸಾಲಿನಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ವತಿಯಿಂದ ಗಂಗಾ ಕಲ್ಯಾಣ ಯೋಜನೆ, ಉದ್ಯಮ ಶೀಲತಾ ಯೋಜನೆ ಹಾಗೂ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಸಾಲ ಸೌಲಭ್ಯ ಒದಗಿಸಲು ಅರ್ಹ ಪರಿಶಿಷ್ಟ ಜಾತಿಯ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯೊಂದಿಗೆ ಫೋಟೋ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ಗುರುತಿನ ಚೀಟಿ, ಬ್ಯಾಂಕ್ ಪಾಸ್ ಪುಸ್ತಕ ಪ್ರತಿ, ಯೋಜನಾ ವರದಿ, ದರಪಟ್ಟಿ (ಅನ್ವಯವಾಗುವ ಘಟಕಗಳಿಗೆ), ವಾಹನವಾಗಿದ್ದಲ್ಲಿ ವಾಹನ ಚಾಲನ ಪರವಾನಗಿ ಮತ್ತು ಬ್ಯಾಡ್ಜ್‍ನ ಪ್ರತಿ, ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಚಾಲ್ತಿ ಪಹಣಿ (ಆರ್‍ಟಿಸಿ) ಮತ್ತು ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರರ ಪತ್ರ, ಮ್ಯುಟೇಷನ್, ನಕ್ಷೆ ಸಲ್ಲಿಸಬೇಕು.

ಈ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಜಿಲ್ಲಾ ಕಚೇರಿಯಿಂದ ಉಚಿತವಾಗಿ ಅರ್ಜಿ ಪಡೆದು ದ್ವಿಪ್ರತಿಯಲ್ಲಿ ದಾಖಲಾತಿಗಳೊಂದಿಗೆ ಜಿಲ್ಲಾ ಕಚೇರಿಗೆ ಆಗಸ್ಟ್ 14 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಹೊಸ ಬಡಾವಣೆ, ರೇಸ್ ಕೋರ್ಸ್, ಮಡಿಕೇರಿ, ಕೊಡಗು ಜಿಲ್ಲೆ ಇವರನ್ನು ಹಾಗೂ ದೂರವಾಣಿ ಸಂಖ್ಯೆ 08272-228857 ನ್ನು ಸಂಪರ್ಕಿಸಬಹುದು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.