ಮಡಿಕೇರಿ, ಜೂ. 26: ಜಿಲ್ಲಾಡಳಿತದ ಜೊತೆ ಸಮುದಾಯ ಕೈಜೋಡಿಸಿದ್ದಲ್ಲಿ ಪ್ರಕೃತಿ ವಿಕೋಪ ಸಂಭವಿಸಿದ ಸಂದರ್ಭ ಸಮಸ್ಯೆ ಎದುರಿಸಲು ಸಾಧ್ಯ ಎಂದು ಪುನರ್ ವಸತಿ ವಿಭಾಗದ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಹೇಳಿದ್ದಾರೆ.

ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ವತಿಯಿಂದ ರಾಷ್ಟ್ರೀಯ ಸೇವಾ ಯೋಜನಾ ವಿದ್ಯಾರ್ಥಿಗಳಿಗೆ ವಿಪತ್ತು ನಿರ್ವಹಣೆ ಬಗ್ಗೆ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಹಲವು ಸಮಸ್ಯೆಗಳು ಉಂಟಾಗುತ್ತವೆ. ಇದರಿಂದ ಜೀವಹಾನಿ ಹಾಗೂ ಆಸ್ತಿಪಾಸ್ತಿ ಹಾನಿ ಉಂಟಾಗಿ ಆರ್ಥಿಕ ಪರಿಸ್ಥಿತಿ ಹದಗೆಡುತ್ತದೆ. ಆದ್ದರಿಂದ ಪ್ರಕೃತಿ ವಿಕೋಪ ಎದುರಿಸುವಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ರಾಷ್ಟ್ರೀಯ ಸೇವಾ ಯೋಜನಾ ವಿದ್ಯಾರ್ಥಿಗಳು ಕೈಜೋಡಿಸುವಂತಾಗ ಬೇಕು ಎಂದು ತಿಳಿಸಿದರು. ಪ್ರಸಕ್ತ ಬಾರಿಯ ವಿಕೋಪ ಮುನ್ನೆಚರಿಕೆಯ ನಿರ್ವಹಣೆಗೆ ಜಿಲ್ಲಾಡಳಿತ ಈಗಾಗಲೇ ಸಿದ್ಧತೆಯನ್ನು ಮಾಡಿಕೊಂಡಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ. ತಿಮ್ಮಯ್ಯ ಮಾತನಾಡಿ ಕಳೆದ ಬಾರಿ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಹಲವು ಸಮಸ್ಯೆಗಳು ಉಂಟಾದವು. ಈ ಬಾರಿ ಯಾವದೇ ರೀತಿಯ ತೊಂದರೆಯಾಗದಂತೆ ನೋಡಿ ಕೊಳ್ಳುವದು ಎಲ್ಲರ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಎನ್‍ಎಸ್‍ಎಸ್. ವಿದ್ಯಾರ್ಥಿಗಳು ಅಗತ್ಯ ಸಹಕಾರ ನೀಡುವಂತೆ ಸಲಹೆ ಮಾಡಿದರು. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಮಾಲೋಚಕ ಪ್ರಭಾತ್ ಕಲ್ಕೂರ ಮಾತನಾಡಿ ಮುಂದಿನ ದಿನಗಳಲ್ಲಿ ವಿಪತ್ತು ಸಂಭವಿಸಿದಲ್ಲಿ ಎನ್‍ಎಸ್‍ಎಸ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲಾಗುವದು ಎಂದು.