ಶನಿವಾರಸಂತೆ, ಜೂ. 26: ಕನ್ನಡ ನಾಡು-ನುಡಿ, ನೆಲ-ಜಲದ ಬಗ್ಗೆ ಅಭಿಮಾನ ಹೊಂದಿರುವ ಕರ್ನಾಟಕ ರಕ್ಷಣಾ ವೇದಿಕೆ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಸರೋಜಮ್ಮ ಅಭಿಪ್ರಾಯಪಟ್ಟರು.
ಚಿಕ್ಕಕೊಳತ್ತೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕರವೇ (ಶಿವರಾಮೇಗೌಡ ಬಣ) ತಾಲೂಕು ಹಾಗೂ ಹೋಬಳಿ ಘಟಕಗಳು ದಾನಿಗಳ ಸಹಭಾಗಿತ್ವದಲ್ಲಿ ನೋಟ್ ಪುಸ್ತಕ, ಲೇಖನಿ, ಸಾಮಗ್ರಿ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕರವೇ ತಾಲೂಕು ಘಟಕದ ಕಾರ್ಯದರ್ಶಿ ಪ್ರವೀಣ್ ಮಾತನಾಡಿ, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿ ಕಲಿಕಾ ಗುಣಮಟ್ಟ ಸುದಾರಿಸಿದರೆ ಸರಕಾರಿ ಶಾಲೆಗಳು ಉಳಿಯುತ್ತವೆ ಎಂದರು.
ದಾನಿ ಸಿನಾನ್ ಹಾಗೂ ಕರವೇ ಪದಾಧಿಕಾರಿಗಳಾದ ಆನಂದ್ ಮತ್ತು ಪ್ರವೀಣ್ ಅವರನ್ನು ಶಾಲಾ ಶಿಕ್ಷಕರು ಹಾಗೂ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಪ್ರೀತಿ ಅಧ್ಯಕ್ಷತೆ ವಹಿಸಿದ್ದರು. ಕರವೇ ತಾಲೂಕು ಘಟಕದ ಅಧ್ಯಕ್ಷ ಪ್ರಾನ್ಸಿಸ್ ಡಿಸೋಜ, ಹೋಬಳಿ ಘಟಕದ ಅಧ್ಯಕ್ಷ ಆನಂದ್, ರಾಮನಳ್ಳಿ ಘಟಕದ ಅಧ್ಯಕ್ಷ ಹರೀಶ್, ಸದಸ್ಯರಾದ ರಾಜು, ಲೂಯಿಸ್, ರಂಜಿತ್, ಸಚಿನ್, ದಿನೇಶ್, ಶಶಿ, ಮಂಜು, ರಕ್ಷಿತ್ ಹಾಗೂ ಶಿಕ್ಷಕರು ಹಾಜರಿದ್ದರು.