ಸೋಮವಾರಪೇಟೆ, ಜೂ. 26: ಕರ್ನಾಟಕ ರಾಜ್ಯ ಗ್ರಾಮ ಸಹಾಯಕರ ಸಂಘದ ವಿಶೇಷ ಸಭೆ ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ಅಧ್ಯಕ್ಷ ಹೆಚ್.ಸಿ. ಸುರೇಶ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಗ್ರಾಮ ಸಹಾಯಕರ ಕುಂದುಕೊರತೆಗಳ ಬಗ್ಗೆ ಚರ್ಚಿಸಲಾಯಿತು. ಕಳೆದ ಹಲವು ವರ್ಷಗಳಿಂದ ಕಂದಾಯ ಇಲಾಖೆಯಲ್ಲಿ ಗ್ರಾಮ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇಂದಿಗೂ ಖಾಯಂ ಮಾಡುವ ಬಗ್ಗೆ ಸರ್ಕಾರ ಯಾವದೇ ಕ್ರಮ ತೆಗೆದುಕೊಂಡಿಲ್ಲ. ರಾಜ್ಯದ ಮುಖ್ಯಮಂತ್ರಿಗಳಿಗೆ ಖಾಯಂಗೊಳಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸುವಂತೆ ಸಭೆ ತೀರ್ಮಾನಿಸಿತು. ವೇದಿಕೆಯಲ್ಲಿ ಉಪಾಧ್ಯಕ್ಷ ತುಂಗಪ್ಪ, ಕಾರ್ಯದರ್ಶಿ ಲೀನಾ ಡಿಸೋಜಾ, ಖಜಾಂಚಿ ಶಶಿಕುಮಾರ್, ಸಹಕಾರ್ಯದರ್ಶಿ ಯಶೋಧ ಸೇರಿದಂತೆ ಸದಸ್ಯರು ಪಾಲ್ಗೊಂಡಿದ್ದರು.