ಹೆಬ್ಬಾಲೆ, ಜೂ. 26: ಸೋಮವಾರಪೇಟೆ ತಾಲೂಕು ಕುಶಾಲನಗರ ಹೋಬಳಿ ಹೆಬ್ಬಾಲೆ ಗ್ರಾಮದ ಬನಶಂಕರಿ ಸಮುದಾಯ ಭವನದಲ್ಲಿ ತಾ. 29 ರಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅಧ್ಯಕ್ಷತೆಯಲ್ಲಿ ನಾಮಧಾರಿ ಗೌಡ ಜನಾಂಗದವರಿಗೆ ಜಾತಿ ಪ್ರಮಾಣ ಪತ್ರ ವಿತರಿಸುವ ಸಂಬಂಧ ಗ್ರಾಮ ಸಭೆಯನ್ನು ಏರ್ಪಡಿಸಲಾಗಿದೆ.
ಕೊಡಗು ಜಿಲ್ಲೆಯ ನಾಮಧಾರಿ ಗೌಡ ಜನಾಂಗದವರಿಗೆ ಜಾತಿ ದೃಢೀಕರಣ ಪತ್ರ ನೀಡುವಲ್ಲಿ ಇರುವ ಗೊಂದಲವನ್ನು ಸರಿಪಡಿಸುವ ಬಗ್ಗೆ ಭಾರತದ ಗ್ಯಾಸೆಟಿಯರ್ ಕರ್ನಾಟಕ ರಾಜ್ಯ ಕೊಡಗು ಜಿಲ್ಲೆ (ಪರಿಷ್ಕೃತ ಆವೃತ್ತಿ)ಯಲ್ಲಿ ಉಲ್ಲೇಖಿಸಿರುವಂತೆ ಜಾತಿ ಪ್ರಮಾಣ ಪತ್ರ ನೀಡುವ ಬಗ್ಗೆ ಸ್ಥಳದಲ್ಲಿಯೇ ಪರಿಶೀಲಿಸಿಕೊಂಡು ತಹಶೀಲ್ದಾರರಿಗೆ ಕಲಂ4(ಎ)ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಾತಿ ಪ್ರಮಾಣ ಪತ್ರವನ್ನು ನೀಡುವ ಬಗ್ಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅಧ್ಯಕ್ಷತೆಯಲ್ಲಿ ಕುಶಾಲನಗರ ಹೋಬಳಿ ಹೆಬ್ಬಾಲೆ ಗ್ರಾಮದ ಬನಶಂಕರಿ ಸಮುದಾಯ ಭವನದಲ್ಲಿ ಪೂರ್ವಾಹ್ನ 10 ಗಂಟೆಗೆ ಗ್ರಾಮಸಭೆಯನ್ನು ಏರ್ಪಡಿಸಲಾಗಿದೆ.
ಗ್ರಾಮಸಭೆಗೆ ಸೋಮವಾರಪೇಟೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ಸಮಾಜ ಕಲ್ಯಣಾಧಿಕಾರಿ, ಹಿಂದುಳಿದ ವರ್ಗಗಳ ಇಲಾಖೆ ವಿಸ್ತಾರಣಾಧಿಕಾರಿ, ಕಂದಾಯ ಪರಿವೀಕ್ಷಕರು, ಗ್ರಾಮ ಲೆಕ್ಕಿಗರು ಹಾಗೂ ಹೆಬ್ಬಾಲೆ, ಶಿರಂಗಾಲ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಕಡ್ಡಾಯವಾಗಿ ಹಾಜರಾಗುವಂತೆ ತಾಲೂಕು ತಹಶೀಲ್ದಾರ್ ಗೋವಿಂದರಾಜ್ ತಿಳಿಸಿದ್ದಾರೆ.