ನಾಪೆÇೀಕ್ಲು, ಜೂ. 26: ನಾಪೆÉÇೀಕ್ಲು ಗ್ರಾಮದ ಶ್ರೀ ಭಗವತಿ ದೇವರ ದೇವಾಲಯಕ್ಕೆ ಸಂಬಂಧಿಸಿದ ನಾಪೆÉÇೀಕ್ಲು ಪಟ್ಟಣದ ಮುಖ್ಯ ರಸ್ತೆಯ ಬಳಿಯಿರುವ ಶ್ರೀ ಅಯ್ಯಪ್ಪ ದೇವರ ಕಾಡಿನಲ್ಲಿ ಅರಣ್ಯ ಇಲಾಖೆ ವಸತಿ ಗೃಹ ನಿರ್ಮಿಸಲು ಉದ್ದೇಶಿಸಿದ್ದು, ಯಾವದೇ ಕಾರಣಕ್ಕೂ ಇದಕ್ಕೆ ಅವಕಾಶ ನೀಡುವದಿಲ್ಲ ಎಂದು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.
ದೇವರ ಕಾಡಿನ ಬಳಿ ಜಮಾಯಿಸಿದ ಗ್ರಾಮಸ್ಥರು ದೇವರ ಕಾಡು ಇಂದು ಉಳಿದಿರುವದೇ ಗ್ರಾಮಸ್ಥರಿಂದ. ಈ ಬನದಲ್ಲಿ ಶ್ರೀ ಅಯ್ಯಪ್ಪ ದೇವರ ಪೂಜಾ ಸ್ಥಳವಿದ್ದು, ಇಲ್ಲಿ ತಪ್ಪದೇ ಪೂಜಾ ವಿಧಿ ವಿಧಾನಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ನಾಪೆÉÇೀಕ್ಲು ಭಗವತಿ ದೇವರ ವಾರ್ಷಿಕ ಉತ್ಸವದ ಸಮಯದಲ್ಲಿ ದೇವರು ಊರ ಪ್ರದಕ್ಷಿಣೆ ಬರುವಾಗಲೂ ಪೂಜೆ ಸಲ್ಲಿಸಲಾಗುತ್ತದೆ. ಸುಮಾರು 1000 ವರ್ಷಗಳ ಇತಿಹಾಸ ಇರುವ ದೇವರ ಕಾಡಿನಲ್ಲಿ ಅರಣ್ಯ ಇಲಾಖೆ ವಸತಿ ಗೃಹ ನಿರ್ಮಿಸಲು ಯಾವದೇ ಕಾರಣಕ್ಕೂ ಅವಕಾಶ ನೀಡುವದಿಲ್ಲ ಎಂದು ಹೇಳಿದರು. ಇದಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವರು, ಸಂಸದರು, ಶಾಸಕರು, ಅರಣ್ಯಾಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವದು ಎಂದು ಹೇಳಿದ ಗ್ರಾಮಸ್ಥರು ಅರಣ್ಯ ಇಲಾಖೆ ವಸತಿ ಗೃಹ ನಿರ್ಮಾಣಕ್ಕೆ ಮುಂದಾದರೆ ಉಗ್ರ ಪ್ರತಿಭಟನೆ ನಡೆಸಲಾಗುವದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಕುಲ್ಲೇಟಿರ ಮಾದಪ್ಪ, ಗೌರವ ಕಾರ್ಯದರ್ಶಿ ಅರೆಯಡ ಡಿ. ಸೋಮಪ್ಪ, ಎಲ್ಲಾ ತಕ್ಕ ಮುಖ್ಯಸ್ಥರು, ಗ್ರಾಮಸ್ಥರು ಇದ್ದರು.