ಮಡಿಕೇರಿ, ಜೂ. 26: ಕುಶಾಲನಗರ ಸಮೀಪದ ಅತ್ತೂರು ಜ್ಞಾನಗಂಗಾ ವಸತಿ ಶಾಲೆಯಲ್ಲಿ ಅಂತರ್ರಾಷ್ಟ್ರೀಯ ಯೋಗದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಸಂಸ್ಥೆಯ ಪ್ರಾಂಶುಪಾಲೆ ಜಿಜಿಜೋಸ್ ಉದ್ಘಾಟಿಸಿ ಯೋಗದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಯೋಗ ಶಿಕ್ಷಕರಾದ ಶಿವರಾಮ್ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ಮಾಡಿಸಿದರು. ಈ ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರು, ದೈಹಿಕ ಶಿಕ್ಷಕರು ಮತ್ತು ಶಿಕ್ಷಕ ವೃಂದ ಪಾಲ್ಗೊಂಡಿದ್ದರು. ಗೋಣಿಕೊಪ್ಪ ವರದಿ: ಕುಟ್ಟ ಹಿರಿಯ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸಾಮೂಹಿಕ ಯೋಗ ಪ್ರದರ್ಶನ ಮಾಡುವ ಮೂಲಕ ಯೋಗದ ಮಹತ್ವವನ್ನು ಸಾರಿದರು.
ಶಾಲೆಯ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಪಿ.ಹೆಚ್. ಅಲೀಮಾ ನೇತೃತ್ವದಲ್ಲಿ ಯೋಗ ಅಭ್ಯಾಸ ನಡೆಯಿತು. ಸುಮಾರು 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗಾಸನ ಮಾಡಿದರು.