ಮಡಿಕೇರಿ, ಜೂ. 26: ಕ್ಯಾಂಪಸ್ ಫ್ರಂಟ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ‘ಹೆಲ್ತಿ ಕ್ಯಾಂಪಸ್’ ಅಭಿಯಾನದ ಅಂಗವಾಗಿ “ಜಲ ಸಂರಕ್ಷಣೆ ನಮ್ಮ ಹೊಣೆ’ ಕಾರ್ಯಕ್ರಮ ಮಡಿಕೇರಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆಯಿತು. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದಿಂದ ರಾಜ್ಯಾದ್ಯಂತ ನಡೆಯುತ್ತಿರುವ ಹೆಲ್ತಿ_ಕ್ಯಾಂಪಸ್ ಅಭಿಯಾನದ ಭಾಗವಾಗಿ ಈ ಕಾಲೇಜಿನ ವಿದ್ಯಾರ್ಥಿನಿಯರಿಗೆ ಪರಿಸರ ಸಂರಕ್ಷಣೆ, ಜಲ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಲಾಯಿತು. ಕಾಲೇಜಿನಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕ್ಯಾಂಪಸ್ ಫ್ರಂಟ್ ರಾಜ್ಯ ಸಮಿತಿ ಸದಸ್ಯರಾದ ಮೊಹಮ್ಮದ್ ಸಾದಿಕ್, ಕೊಡಗು ಜಿಲ್ಲಾ ಅಧ್ಯಕ್ಷ ಅಬ್ದುಲ್ ಸಲಾಂ, ಜಿಲ್ಲಾ ಕಾರ್ಯದರ್ಶಿ ಇಬ್ರಾಹಿಂ ಇದ್ದರು.