ನಾಪೆÇೀಕ್ಲು, ಜೂ. 28: ಸಮೀಪದ ಬೇತು ಗ್ರಾಮದ ಬಾಪೂಜಿ ಕಾಲೋನಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು.
ಅತಿವೃಷ್ಟಿಯಿಂದ ಹಾನಿಗೊಳಗಾದ ಪರಿಶಿಷ್ಟ ಜಾತಿ ಕಾಲೋನಿಗಳ ಅಭಿವೃದ್ಧಿಗೆ ರೂ. 17 ಲಕ್ಷ ವೆಚ್ಚದ ಕಾಮಗಾರಿಗಳಿಗೆ ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡ ಶೋಭಾ ಮೋಹನ್ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯ ಮುರಳಿ ಕರುಂಬಮ್ಮಯ್ಯ, ತಾಲೂಕು ಪಂಚಾಯಿತಿ ಸದಸ್ಯರಾದ ನೆರೆಯಂಡಮ್ಮಂಡ ಉಮಾಪ್ರಭು, ಕೋಡಿಯಂಡ ಇಂದಿರಾ ಹರೀಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಇಸ್ಮಾಯಿಲ್, ಉಪಾಧ್ಯಕ್ಷ ಕಾಳೆಯಂಡ ಸಾಬಾ ತಿಮ್ಮಯ್ಯ, ಗ್ರಾಮ ಪಂಚಾಯಿತಿ ಸದಸ್ಯ ಚೋಕಿರ ರೋಶನ್, ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಕುಂಡ್ಯೋಳಂಡ ರಮೇಶ್ ಮುದ್ದಯ್ಯ, ಚೋಕಿರ ಸಜಿತ್, ಮತ್ತಿತರರು ಇದ್ದರು.