ಬೆಂಗಳೂರು, ಜೂ. 27: ಕರ್ನಾಟಕ ರಾಜ್ಯದ ಕಾಫಿ ಬೆಳೆಗಾರರು ಅನುಭವಿಸುತ್ತಿರುವ ತೊಂದರೆಗಳು ಹಾಗೂ ಅತಿವೃಷ್ಟಿಯಿಂದಾಗಿರುವ ನಷ್ಟಗಳ ಕುರಿತು ಇಂದು ದೆಹಲಿಯಲ್ಲಿ ಹಣಕಾಸು ಸಚಿವೆ

(ಮೊದಲ ಪುಟದಿಂದ) ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರು ಭೇಟಿ ಮಾಡಿ ಮನವಿ ಸಲ್ಲಿಸಿದರು. ಕಾಫಿ ಬೆಳೆಗಾರರಿಗೆ ಅನುಕೂಲಕರವಾಗುವಂತೆ ಸಾಲದ ನಿಯಮಾವಳಿಗಳನ್ನು ಸರಳೀಕರಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರು ಜೊತೆಗಿದ್ದರು.