ಕುಶಾಲನಗರ, ಜೂ. 27: ಅಂvರ್ರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಕುಶಾಲನಗರದಲ್ಲಿ ಪೊಲೀಸರು ಕಾರ್ಯಕ್ರಮ ಹಮ್ಮಿಕೊಂಡರು. ಸ್ಥಳೀಯ ಖಾಸಗಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕುಶಾಲನಗರ ಟೌನ್ ಪೊಲೀಸ್ ಠಾಣೆಯ ಆಶ್ರಯದಲ್ಲಿ ಕನ್ನಡ ಭಾರತಿ ಪಪೂ ಕಾಲೇಜಿನಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭ ಡಿವೈಎಸ್ಪಿ ಮುರಳೀಧರ್, ವೃತ್ತ ನಿರೀಕ್ಷಕ ದಿನೇಶ್ ಕುಮಾರ್, ಠಾಣಾಧಿಕಾರಿ ಜಗದೀಶ್, ಸೋಮೇಗೌಡ, ಅಪರಾಧ ವಿಭಾಗದ ಸದಾಶಿವ ಮತ್ತು ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರಾದ ಜಯವರ್ಧನ ಇದ್ದರು.