ಕೂಡಿಗೆ, ಜೂ. 28: ಕೂಡಿಗೆ ಪಂಚಾಯ್ತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದ ಪರಿಶಿಷ್ಟ ಜಾತಿಯ ಕಾಲೋನಿಗೆ ಅನುದಾನದಲ್ಲಿ ಯಾವದೇ ರೀತಿಯ ಅಭಿವೃದ್ಧಿ ಕಾರ್ಯ ನಡೆಸದೆ, ಮನೆ ದುರಸ್ತಿಗೆ ಹಣ ಬಿಡುಗಡೆ ಮಾಡದೆ, ಮನೆಗಳು ಬೀಳುವ ಹಂತದಲ್ಲಿದ್ದರೂ ಮನೆ ಮಂಜೂರು ಮಾಡಿಲ್ಲ. ಕಾಂಕ್ರಿಟ್ ರಸ್ತೆ ನಿರ್ಮಿಸಲು ಒತ್ತಾಯಿಸಿದರೂ ಇದುವರೆಗೂ ರಸ್ತೆ ನಿರ್ಮಾಣ ಮಾಡಿಲ್ಲ ಎಂದು ಆರೋಪಿಸಿ ಸದಸ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಡ್ ಸಭೆಯಲ್ಲಿ ಸದಸ್ಯರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ನಂತರ ಗ್ರಾಮಸ್ಥರಾದ ಅಣ್ಣಯ್ಯ, ಜವರಪ್ಪ, ನಿಂಗಮ್ಮ, ತುಳಸಿ, ಜವರಮ್ಮ ಅವರು ಮುಂದಿನ ದಿನಗಳಲ್ಲಿ ಅನುದಾನದಲ್ಲಿ ಪರಿಶಿಷ್ಟ ಜಾತಿಯ ಕಾಲೋನಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಅಭಿವೃದ್ಧಿ ಪಡಿಸಬೇಕೆಂದು ಆಗ್ರಹಿಸಿದರು. ಸಭೆಯಲ್ಲಿ ಸುಚಿತ್ವ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಚರ್ಚೆಗಳು ನಡೆದವು.

ಸಭೆಯಲ್ಲಿ ಉಪಾಧ್ಯಕ್ಷ ಗಿರೀಶ್‍ಕುಮಾರ್, ಸದಸ್ಯರಾದ ಜಯಶ್ರೀ, ಪುಷ್ಪ, ಅಭಿವೃದ್ಧಿ ಅಧಿಕಾರಿ ಅಶ್ವಿನಿ, ಕಾರ್ಯದರ್ಶಿ ಶಿಲ್ಪ ಸೇರಿದಂತೆ ಗ್ರಾಮಸ್ಥರು ಇದ್ದರು.