ಸೋಮವಾರಪೇಟೆ, ಜೂ. 28: ಕೊಡಗು ಜಿಲ್ಲಾ ಪಂಚಾಯಿತಿಯ ಸ್ವಚ್ಛಮೇವ ಜಯತೆ ಕಾರ್ಯಕ್ರಮದ ಜಾಗೃತಿ ರಥ ತಾಲೂಕಿನ ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿತು.
ಪಂಚಾಯಿತಿ ಆವರಣದಲ್ಲಿ ಸ್ಥಳೀಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪರಿಸರ ಸ್ವಚ್ಛತೆಯ ಬಗ್ಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಾ ಮಾಹಿತಿ ನೀಡಿದರು. ಹಸಿಕಸ ಹಾಗೂ ಒಣಕಸದ ವಿಂಗಡಣೆ, ಬಯಲು ಶೌಚದ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಾಲಕೃಷ್ಣ ರೈ ಜಾಗೃತಿ ಮೂಡಿಸಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯ ಪ್ರಸಾದ್, ಫೌಸಿಯ, ಗೌತಮ್‍ಶಿವಪ್ಪ, ರಾಘವೇಂದ್ರ, ಮುಖ್ಯ ಶಿಕ್ಷಕಿ ಪಾರ್ವತಿ, ಶಿಕ್ಷಕ ರಾಘವೇಂದ್ರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.